Paraded and assaulted three women video viral, Four arrested amid outcry over barbaric act in Manipur

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿದ ನಾಲ್ವರನ್ನು ಬಂಧಿಸಲಾಗಿದೆ

ಇಡೀ ನಾಗರಿಕ ಸಮುದಾಯವೇ ತಲೆತಗ್ಗಿಸುವಂತಹ ಘಟನೆಯೊಂದು ಈಶಾನ್ಯ ಭಾರತದಿಂದ ವರದಿಯಾಗಿದೆ. ಮಣಿಪುರದ ಚುರಾಚಂದಪುರದಲ್ಲಿ ಜನಾಂಗೀಯ ಘರ್ಷಣೆಯ ನಡುವೆ ಕುಕಿ ಬುಡಕಟ್ಟಿನ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆದ ನಂತರ ಭಾರಿ ಪ್ರತಿಭಟನೆಯನ್ನ ದೇಶಾದ್ಯಂತ ನಡೆಸಲಾಗುತ್ತಿದೆ. ಮೇ ತಿಂಗಳಿನ 4 ನೇ ತಾರೀಖಿನ ವೀಡಿಯೊ ಜುಲೈ 19 ರಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡು ವೈರಲ್‌ ಆದ ಪರಿಣಾಮ ಪ್ರತಿಭಟನೆ ಬುಗಿಲೆದ್ದಿದೆ. ಮಣಿಪುರದ ಪರಿಸ್ಥಿತಿಯನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದೆಹಲಿಯಲ್ಲೂ ಪ್ರತಿಭಟನೆ ನಡೆಸಿದರು. ವೀಡಿಯೋದಲ್ಲಿ ಕಂಡುಬರುವ ಮೈಟಿ ಸಮುದಾಯದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇತರರಿಗಾಗಿ ಶೋಧ ನಡೆಸುತ್ತಿದ್ದಾರೆ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಒಟ್ಟು 4 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಗುರುವಾರ ಪ್ರಕಟಿಸಿದ್ದಾರೆ.



ಮೇ 4 ರಂದು ಬಿ ಫೈನೋಮ್ ಗ್ರಾಮದಲ್ಲಿ ಜನಸಮೂಹವೊಂದು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ಗುರುವಾರ ತಿಳಿಸಿದ್ದಾರೆ. “ವೈರಲ್ ವಿಡಿಯೋ ಪ್ರಕರಣದಲ್ಲಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ

ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪಿ.ಎಸ್‌.ಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದ ಮೇಲೆ 03 ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಒಟ್ಟು 04 ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಮಣಿಪುರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಹಿಂದಿನ ದಿನ, ತೌಬಲ್ ನಿವಾಸಿ ಹೀರುಮ್ ಹೇರಾ ದಾಸ್ , ಪ್ರಕರಣದಲ್ಲಿ ಪೊಲೀಸರು ಬಂಧಿಸಿದ ಮೊದಲ ಆರೋಪಿ. ಮುಂದಿನ ಕೆಲವೇ ಗಂಟೆಗಳಲ್ಲಿ ಹೆಚ್ಚಿನವರನ್ನು ಬಂಧಿಸಲಾಗುವುದು ಎಂದು ಮಣಿಪುರ ಪೊಲೀಸರು ತಿಳಿಸಿದ್ದು, ಈಗಾಗಲೇ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯ ಸೆಕ್ಷನ್‌ಗಳನ್ನು ಸೇರಿಸಲಾಗಿದೆ.

ಘಟನೆಯ ಹಿನ್ನೆಲೆ:

ಮೇ ತಿಂಗಳಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 50,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೇ 3 ರಂದು ಚುರಾಚಂದ್‌ಪುರದಲ್ಲಿ ಕುಕಿ ಸಮುದಾಯವು ಮೈಟೆಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಪ್ರಸ್ತಾಪದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ನಂತರ ಘರ್ಷಣೆಗಳು ಭುಗಿಲೆದ್ದವು ಎಂದು ತಿಳಿದುಬಂದಿದೆ.

 ಎಫ್‌ಐಆರ್ ಪ್ರಕಾರ, ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇ 4 ರಂದು, ಈಶಾನ್ಯ ರಾಜ್ಯದಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಸ್ಫೋಟಗೊಂಡ ಒಂದು ದಿನದ ನಂತರ  800-1,000 ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪು ಗ್ರಾಮದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚುವ ಮೊದಲು ಮನೆಗಳನ್ನು ಧ್ವಂಸಗೊಳಿಸಿತು ಮತ್ತು ಲೂಟಿ ಮಾಡಿತು ಎನ್ನಲಾಗಿದೆ. ಐದು ಜನರ ಕುಟುಂಬವೊಂದು ಪ್ರಾಣ ಉಳಿಸಿಕೊಳ್ಳಲು ಗ್ರಾಮದಿಂದ ಕಾಡಿಗೆ ಓಡಿ ಹೋಗಿತ್ತು. ಅವರನ್ನು ಪೊಲೀಸ್ ತಂಡ ರಕ್ಷಿಸಿದೆ ಎಂದು ತಿಳಿದುಬಂದಿದೆ.



ಶಸ್ತ್ರ ಸಜ್ಜಿತ ಗುಂಪು ಐದು ಜನರ ಗುಂಪಿನ 56 ವರ್ಷದ ವ್ಯಕ್ತಿಯನ್ನು ಕೊಂದಿತು. ಅವರಲ್ಲಿ ಇಬ್ಬರನ್ನು ವಿವಸ್ತ್ರಗೊಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದ್ದು, 21 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ತನ್ನ ಸಹೋದರಿಯನ್ನು ಉಳಿಸಲು ಪ್ರಯತ್ನಿಸಿದ್ದಕ್ಕಾಗಿ ಆಕೆಯ 19 ವರ್ಷದ ಸಹೋದರನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.



Share:

0 Comments:

ಕಾಮೆಂಟ್‌‌ ಪೋಸ್ಟ್‌ ಮಾಡಿ

Subscribe Us

ನನ್ನ ನೆಚ್ಚಿನ ಸುದ್ಧಿ ಜಾಲಾ

Join Our Team

Labels

Blog Archive