ಮೀನುಗಾರಿಕಾ ಬೋಟುಗಳಿಗೆ ನೀಡುತ್ತಿದ್ದ ಸಬ್ಸಿಡಿ ಇಂಧನ ಹೆಚ್ಚಳ

ಮೀನುಗಾರರ ದೋಣಿಗಳಿಗೆ ನೀಡುತ್ತಿದ್ದ ಸಬ್ಸಿಡಿ ಹೆಚ್ಚಳ: ಮುಖ್ಯಮಂತ್ರಿ ಸಿದ್ದರಾಮಯ್ಯ 

http://

ದಕ್ಷಿಣ ಕನ್ನಡದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನೇಕ ವಿಷಯಗಳನ್ನು ಚರ್ಚಿಸಿದ ಅವರು ಮೀನುಗಾರರ ಸಂಕಷ್ಟಕ್ಕೆ ಸ್ಪಂದಿಸಿ ಅವರು ಹೇಳುತ್ತಾ ಮೀನುಗಾರರಿಗೆ ಸದರಿ ಆಯವ್ಯಯದಲ್ಲಿ ಅನುದಾನ ಮೀಸಲಿರಿಸಲಾಗಿದೆ ಎಂದರು.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಿದ್ದೇವೆ. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿನ್ನೆ ಸುದ್ಧಿಗೋಷ್ಟಿಯಲ್ಲಿ ತಿಳಿಸಿದರು.
ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್ ಗಳನ್ನು ಪೆಟ್ರೋಲ್ ಇಂಜಿನ್ ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ನಾವು ಆಯವ್ಯಯದಲ್ಲಿ ಘೋಷಿಸಿದ್ದೇವೆ, ಈ ಕಾರ್ಯಕ್ರಮ ಸರಿಯಾಗಿ ಜಾರಿಯಾಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಿದರು.
- ಮುಖ್ಯಮಂತ್ರಿ
@siddaramaiah

Share:

0 Comments:

ಕಾಮೆಂಟ್‌‌ ಪೋಸ್ಟ್‌ ಮಾಡಿ

Subscribe Us

ನನ್ನ ನೆಚ್ಚಿನ ಸುದ್ಧಿ ಜಾಲಾ

Join Our Team

Labels

Blog Archive